ನವದೆಹಲಿ, ಸೆ 06 (DaijiworldNews/MS): ದಿ ಮಾರ್ನಿಂಗ್ ಕನ್ಸಲ್ಟ್ ನಡೆಸಿದ 13 ಮಂದಿ ಜಾಗತಿಕ ನಾಯಕರಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅತಿ ಹೆಚ್ಚು ರೇಟಿಂಗ್ ಪಡೆದಿದ್ದಾರೆ. ಹೀಗಾಗಿ ನರೇಂದ್ರ ಮೋದಿ ಅವರು ಸಮೀಕ್ಷೆಯ ಜಾಗತಿಕ ಅನುಮೋದನೆ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸುವ ಮತ್ತೊಮ್ಮೆ ಜಗತ್ತಿನ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ.
ಸೆಪ್ಟೆಂಬರ್ 2 ರಂದು ನವೀಕರಿಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನ ಮಂತ್ರಿ ಅವರು 70% ಅನುಮೋದನಾ ಶ್ರೇಯಾಂಕ ಪಡೆಯುವ ಮೂಲಕ ಯುಎಸ್ ಅಧ್ಯಕ್ಷ ಜೋ ಬಿಡೆನ್, ಯುಕೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಮತ್ತು ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಸೇರಿದಂತೆ ಜಗತ್ತಿನ ಘಟಾನುಘಟಿ ನಾಯಕರನ್ನು ಹಿಂದಿಕ್ಕಿದಂತಾಗಿದೆ.
ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ 64% ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಟಲಿಯ ಪ್ರಧಾನ ಮಂತ್ರಿ ಮಾರಿಯೋ ಡ್ರಾಗಿ 63% ನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಜೂನ್ ನಲ್ಲಿ ಪ್ರಧಾನಿ ಮೋದಿಯವರ ಅನುಮೋದನೆ ರೇಟಿಂಗ್ 66% ರಿಂದ ಏರಿಕೆಯಾಗಿದೆ. ಪ್ರಧಾನ ಮಂತ್ರಿಯವರ ಅಸಮ್ಮತಿ ರೇಟಿಂಗ್ 25%ಕ್ಕೆ ಇಳಿದಿದೆ, ಇದು 13 ನಾಯಕರಲ್ಲಿ ಅತ್ಯಂತ ಕಡಿಮೆ.