ನವದೆಹಲಿ, ಸ.06 (DaijiworldNews/HR): ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಸಂಬಂಧ ಇಡಿ ಅನೇಕ ಬಾರಿ ಅನಿಲ್ ದೇಶ್ಮುಖ್ ಅವರಿಗೆ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವುದರಿಂದ ತಪ್ಪಿಸಿಕೊಂಡಿದ್ದಾರೆ. ದೇಶದಿಂದ ದೇಶ್ಮುಖ್ ಪಲಾಯನ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ಔಟ್ ನೋಟಿಸ್ ಜಾರಿಯಾಗಿರುವುದಾಗಿ ವರದಿಯಾಗಿದೆ.
ಇನ್ನು ಈ ಪ್ರಕರಣದಲ್ಲಿ ದೇಶ್ಮುಖ್ ಅವರನ್ನು ತನಿಖಾ ಸಂಸ್ಥೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಲು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ನಿರಾಕರಿಸಿತ್ತು.
ಸೆಪ್ಟೆಂಬರ್ 3ರಂದು ದೇಶ್ಮುಖ್ ಅವರ ಕಾನೂನು ಸಲಹಾ ತಂಡದ ಆನಂದ್ ದಾಗಾ ಅವರನ್ನು ಬಂಧಿಸಿತ್ತು.