ಬೆಂಗಳೂರು, ಸ.06 (DaijiworldNews/HR): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತ್ತೆ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದು, ನಾಳೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಬೊಮ್ಮಾಯಿ ಅವರು ವೈಯಕ್ತಿಕ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ ದೆಹಲಿಗೆ ತೆರಳುತ್ತಿದ್ದು, ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಈ ವೇಳೆ ಖಾಲಿ ಇರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡುತ್ತಿರುವ ಹಿನ್ನೆಯಲ್ಲಿ ಇತ್ತ ಸಚಿವಾಕಾಂಕ್ಷಿಗಳಿಂದ ಲಾಬಿ ಆರಂಭವಾಗಿದ್ದು, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದಾರೆ.
ಒಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಾಳಿನ ದೆಹಲಿ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ.