ಶೃಂಗೇರಿ, ಸೆ 06 (DaijiworldNews/MS): ಒಂದೇ ಮನೆಯಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಾ ಶೃಂಗೇರಿಯ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ.
ಅಜ್ಜಿ, ಮಗಳು, ಮೊಮ್ಮಗಳು ಸೇರಿ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ವೀಣಾ(70), ಶಾರದಾ (49), ಶ್ರಾವ್ಯ(16) ಎಂದು ಗುರುತಿಸಾಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821