ಬೆಂಗಳೂರು, ಸ .06 (DaijiworldNews/HR): ಮೂರು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿಯು ಜಯಗಲಿಸಿದ್ದು, ಈ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಯೂಚಿಯಲ್ಲ. ಬಿಜೆಪಿಗೆ ಎಚ್ಚರಿಕೆಯ ಗಂಟೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಹುಬ್ಬಳ್ಳಿ-ಧಾರವಾಡದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮೂರು ಮಂದಿ ಶಾಸಕರು ಇದ್ದಾರೆ. ಹೀಗಾಗಿ ಸಹಜವಾಗಿ ಬಿಜೆಪಿ ಗೆಲುವು ಸಾಧಿಸುತ್ತದೆ. ಮತದಾರರು ಆಡಳಿತ ಪಕ್ಷಕ್ಕೆ ಹೆಚ್ಚು ವಾಲುತ್ತಾರೆ. ನಮ್ಮ ಪಕ್ಷದ ಒಬ್ಬರೇ ಒಬ್ಬ ಶಾಸಕರಿದ್ದಾರೆ ಅಷ್ಟೆ" ಎಂದರು.
ಇನ್ನು "ಬೆಳಗಾವಿಯಲ್ಲಿ ಕಾಂಗ್ರೆಸ್ ಈವರೆಗೆ ಗೆದ್ದಿರಲಿಲ್ಲ, ನಮ್ಮ ಬೆರಳೆಣಿಕೆಯ ಶಾಸಕರಿದ್ದಾರಷ್ಟೆ, ಪಾಲಿಕೆಯ ಚುನಾವಣೆಯ ಫಲಿತಾಂಶವನ್ನಿಟ್ಟುಕೊಂಡು ರಾಜ್ಯದ ಜನತೆಯ ಒಲವು ಬಿಜೆಪಿ ಪರವಾಗಿದೆ ಎಂದು ಹೇಳಲು ಸಾಧ್ಯವಿಲ್ಲ" ಎಂದಿದ್ದಾರೆ.