ನವದೆಹಲಿ, ಸೆ 06 (DaijiworldNews/MS): ಕೇಂದ್ರ ಸರ್ಕಾರದ ವಿರುದ್ದ ರೈತ ಸಂಘಟನೆಗಳು ಸೆಪ್ಟೆಂಬರ್ 27 ರಂದು ಕರೆ ನೀಡಿರುವ ಭಾರತ ಬಂದ್ ಗೆ ಕಾಂಗ್ರೆಸ್ ನ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದೆ.
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ವರ್ಷದ ಸನಿಹದಲ್ಲಿದೆ. ಈ ನಡುವೆ ಮತ್ತೆ ಕೇಂದ್ರ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಸೆಪ್ಟೆಂಬರ್ 27ರಂದು ದೇಶವ್ಯಾಪ್ತಿ ಬಂದ್ ಗೆ ಕರೆ ನೀಡಿದೆ.
ಕಿಸಾನ್ ಮೋರ್ಚಾ ಕರೆಗೆ 300ಕ್ಕೂ ಹೆಚ್ಚು ರೈತ ಸಂಘಟನೆಗಳು ಬೆಂಬಲ ನೀಡುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೈತ ಸಂಘಟನೆ ಕರೆ ನೀಡಿದ ಭಾರತ್ ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ರೈತ ಸಂಘಟನೆಗಳ ಪ್ರತಿಭಟನೆಗೆ ಆರಂಭದಿಂದಲೂ ಬೆಂಬಲ ಸೂಚಿಸಿದ ಕಾಂಗ್ರೆಸ್ ಇತ್ತೀಚೆಗೆ ಕೇಂದ್ರದ ವಿರುದ್ಧದ ಪ್ರತಿಭಟನೆ, ಆಂದೋಲನದ ನಾಯಕತ್ವವನ್ನು ದ್ವಿಗ್ವಿಯ್ ಸಿಂಗ್ಗೆ ನೀಡಲಾಗಿದೆ. ಒಟ್ಟಾರೆ ಬಿಜೆಪಿಯೇತರ ಪಕ್ಷಗಳು ಭಾರತ್ ಬಂದ್ ಲಾಭ ಪಡೆಯಲು ಮುಂದಾಗಿದೆ.