ಬೆಂಗಳೂರು, ಸೆ. 06 (DaijiworldNews/PY): ಅಫ್ಗಾನಿಸ್ತಾನದ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ.
ಇಂದು ದೆಹಲಿಯಲ್ಲಿರುವ ಪಿಎಂ ನಿವಾಸದಲ್ಲಿ ಈ ಸಭೆ ನಡೆದಿದ್ದು, ಮೂರು ಗಂಟೆಗಳ ಕಾಲ ಸಭೆ ನಡೆಯಿತು.
ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಹೊರತಾಗಿ, ಈ ನಿಟ್ಟಿನಲ್ಲಿ ಭಾರತದ ಭವಿಷ್ಯದ ಕ್ರಮದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎನ್ನಲಾಗಿದೆ.
ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಉಪಸ್ಥಿತರಿದ್ದರು.