ಬೆಂಗಳೂರು, ಸೆ. 07 (DaijiworldNews/PY): ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚುತ್ತಿದ್ದು, ನಿಫಾ ವೈರಸ್ ತಡೆಗೆ ರಾಜ್ಯದಲ್ಲೂ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೇರಳ ರಾಜ್ಯದಲ್ಲಿ ಆತಂಕ ಹೆಚ್ಚಿಸಿರುವ ನಿಫಾ ವೈರಸ್ ತಡೆಗೆ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ನಿಯಂತ್ರಣದ ಜೊತೆ ನಿಫಾ ವೈರಸ್ ಬಗ್ಗೆಯೂ ನಿಗಾ ಇಡಲಾಗಿದೆ. ಸದ್ಯ, ಕೇರಳದಿಂದ ಬರುತ್ತಿರುವವರನ್ನು ತಪಾಸಣೆ ಮಾಡಲಾಗುತ್ತಿದೆ. ಮುಂಬರು ದಿನಗಳಲ್ಲಿ ಮತ್ತಷ್ಟು ಬಿಗಿಕ್ರಮ ತೆಗೆದುಕೊಳ್ಳಲಾಗುವುದು. ತಜ್ಞರ ವರದಿ ಕೈಸೇರಿದ ನಂತರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.
ದೆಹಲಿಯಲ್ಲಿ ನಾಳೆ ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದು, ಅವರ ಜೊತೆ ರಾಜ್ಯದ ಹೆಚ್ಚಾರಿ ನಿರ್ಮಾಣದ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ.