ಹಾಸನ, ಸೆ. 07 (DaijiworldNews/PY): ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಹಗ್ಗ ಬಿಗಿದು ಬಾಲನೋರ್ವ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತೆಂಡೆಕೆರೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಮನೋಜ್ (8) ಎಂದು ಗುರುತಿಸಲಾಗಿದೆ.
ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿದ್ದ ಮನೋಜ್ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಕಾಲಿ ಹಗ್ಗ ಕುತ್ತಿಗೆಗೆ ಬಿಗಿದು ಮೃತಪಟ್ಟಿದ್ದಾನೆ.
ಬಾಲಕನ ಪೋಷಕರು ಕಾರ್ಯಕ್ರಮಕ್ಕೆಂದು ಬಾಲಕನನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಕಟ್ಟಿದ ಜೋಕಾಲಿಯಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿಯ ಹಗ್ಗ ಸಿಲುಕಿ ಸಾವನ್ನಪ್ಪಿದ್ದಾನೆ.