ಬೆಳಗಾವಿ, ಸೆ. 08 (DaijiworldNews/PY): "ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಯಾರ ಮೇಲೂ ಕೂಡಾ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, "ಎಫ್ಎಸ್ಎಲ್ ವರದಿ ಬಂದಿರುವುದು ತಿಳಿದಿದೆ. ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಕೂಡಾ ಕೈಬಿಡುವ ಪ್ರಶ್ನೆಯೇ ಇಲ್ಲ" ಎಂದು ಹೇಳಿದ್ದಾರೆ.
ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ವುಡ್ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಹೆಸರು ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಲಾಗಿದೆ.
ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜೊತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎ2 ಆರೋಪಿಯಾಗಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯನ್ನು ಆಧಾರಿಸಿ ಚಾರ್ಜ್ ಶೀಟ್ ನಲ್ಲಿ ಹೆಸರು ಉಲ್ಲೇಖಿಸಲಾಗಿದೆ. ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್ಗೆ ಅನುಶ್ರೀ ಎಕ್ಟಸಿ ಡ್ರಗ್ಸ್ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಹೇಳಿಕೆ ದಾಖಲಿಸಲಾಗಿದೆ.