ಮುಂಬೈ ,ಸೆ 8 (DaijiworldNews/MS): ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ಆ. 8 ರ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೊಳಗಾಗಿದ್ದ ಅವರನ್ನು ಸೆಪ್ಟೆಂಬರ್ 3ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅರುಣಾ ಭಾಟಿಯಾ ಮೃತಪಟ್ಟಿದ್ದಾರೆ.
ತಾಯಿ ಅರುಣಾ ಭಾಟಿಯಾ ನಿಧನದ ಬಗ್ಗೆ ಟ್ವೀಟ್ ಮಾಡಿರುವ ನಟ ಅಕ್ಷಯ್ ಕುಮಾರ " ‘ನನ್ನ ತಾಯಿಯೇ ನನ್ನ ಮೂಲ. ಇಂದು ಅಮ್ಮನ ಅಗಲಿಕೆಯಿಂದ ನಾನು ಸಹಿಸಲಾಗದಷ್ಟು ನೋವು ಅನುಭವಿಸುತ್ತಿದ್ದೇನೆ . ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.