ನವದೆಹಲಿ, ಸೆ. 08 (DaijiworldNews/PY): "ಈಗಾಗಲೇ ರಾಜ್ಯದಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಲಾಗಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, "ಬೆಂಗಳೂರು ಸಬ್ಅರ್ಬನ್ ಯೋಜನೆಯನ್ನು ಶೀಘ್ರವೇ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಕರ್ನಾಟಕ ಹಾಗೂ ಕೆ-ರೈಡ್ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದೇನೆ" ಎಂದಿದ್ದಾರೆ.
"ಕಲಬುರ್ಗಿಯಲ್ಲಿ ರೈಲ್ವೆ ಡಿವಿಸಲ್ ಸ್ಥಾಪಿಸುವ ಬೇಡಿಕೆ ಇದೆ. ಆ ಭಾಗದಲ್ಲಿ ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ನೆರವಾಗಲಿದೆ. ಬಹಳ ದಿನಗಳಿಂದ ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ನೆನೆಗುದಿ ಬಿದ್ದಿದ್ದು, ಈ ಪ್ರಕರಣ ಹೈಕೋರ್ಟ್ನಲ್ಲಿದೆ. ಈ ಬಗ್ಗೆ ಹೊಸ ಡಿಆರ್ಡಿಪಿ ಆಂಡಿದ್ದರೂ ಕೂಡಾ ಅದನ್ನು ಪ್ರಶ್ನಿಸಲಾಗುತ್ತಿದೆ. ಶೀಘ್ರವೇ ಆ ತಡೆಯಾಜ್ಞೆ ತೆರವಿಗೆ ಪ್ರಯತ್ನಿಸಿ ಕಾಮಗಾರಿ ಆರಂಭ ಮಾಡುವಂತೆ ಮನವಿ ಮಾಡಿದ್ದೇನೆ" ಎಂದು ತಿಳಿಸಿದ್ದಾರೆ.