ಬೆಂಗಳೂರು, ಸ. 08 (DaijiworldNews/HR): ರಾಜ್ಯದಲ್ಲಿ ಬುಧವಾರ 1102 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಇಂದು 17 ಸೋಂಕಿತರು ಮೃತಪಟ್ಟಿದ್ದಾರೆ.
ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿಂದು 17 ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 37,458 ಸೋಂಕಿತರು ಸಾವನ್ನಪ್ಪಿ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,58,090 ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ 17,058 ಸಕ್ರಿಯ ಪ್ರಕರಣಗಳು ಇದ್ದು, ಇಂದು 1,69,621 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 338 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 7119 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ.