ಬೆಂಗಳೂರು, ಸ.09 (DaijiworldNews/HR): ಸಮಾಜದಲ್ಲಿನ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡನ್ನೂ ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದರು. ಕಾಂಗ್ರೆಸ್ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಎರಡನ್ನೂ ಸೋಲಿಸಬೇಕು" ಎಂದಿದ್ದಾರೆ.
ಇನ್ನು ಈ ಹಿಂದೆ ಟ್ವೀಟ್ ಮಾಡಿದ್ದ ಚೇತನ್, "ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್ನ ಪ್ರಬಲ ನಾಯಕ. ಆದರೆ, ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ" ಎಂದು ಹೇಳಿದ್ದರು.