ಕಲಬುರ್ಗಿ, ಸೆ 09 (DaijiworldNews/MS): "ಕಲಬುರಗಿ ಪಾಲಿಕೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಪೂರ್ಣ ರೀತಿಯ ಅಧಿಕಾರ ಹಿಡಿಯಲು ನಾವು ಎಲ್ಲಾ ರೀತಿ ಪ್ರಯತ್ನ ನಡೆಸುತ್ತೇವೆ" ಎಂದು ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಪಾಲಿಕೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಹೀಗಾಗಿ ಎಲ್ಲಾ ರೀತಿಯ ತಂತ್ರಗಾರಿಕೆಯಿಂದ ಅಧಿಕಾರ ಹಿಡಿಯುತ್ತೇವೆ. ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಅದ್ಭುತ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿಗೆ ಹೆಚ್ಚು ಸ್ಥಾನ ನೀಡಿದ್ದಾರೆ. ಇದಕ್ಕಾಗಿ ಕಲಬುರಗಿ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮವರೇ ಮೇಯರ್ ಆಗುವುದು ಖಚಿತ" ಎಂದು ತಿಳಿಸಿದ್ದಾರೆ.
"ಮೈತ್ರಿ ಕುರಿತು ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಪೈನಲ್ ಗೆ ಬಂದಿದ್ದೇವೆ , ಗೆಲ್ಲುವುದಕ್ಕಾಗಿ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಅದಕ್ಕಾಗಿ ಕಾದು ನೋಡಿ" ಎಂದು ಹೇಳಿದ್ದಾರೆ.