ಗುಂಟೂರು, ಸ.09 (DaijiworldNews/HR): ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ಮಾಡಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು ಚಿನ್ನಾಭರಣವನ್ನು ಕದ್ದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಬುಧವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗಳನ್ನು ದರೋಡೆಕೋರರ ಗುಂಪು ತಡೆದು ದಂಪತಿಗೆ ಚಾಕು ತೋರಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಇನ್ನು ಘಟನೆ ನಡೆದ ದಿನವೇ ಸಂತ್ರಸ್ತ ಮಹಿಳೆ ಸಮೀಪದ ಸತ್ತನ್ನಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸಿ 8 ಆರೋಪಿಗಳನ್ನು ಬಂಧಿಸಿದ್ದು, ಎಲ್ಲ 8 ಆರೋಪಿಗಳೂ ಪಾಲದುಗು ಬಳಿ ಕೋಲ್ಡ್ ಸ್ಟೋರೇಜ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.