ಬೆಂಗಳೂರು, ಸ.09 (DaijiworldNews/HR): ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಇಳಿಮುಖ ಆಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನದಲ್ಲಿ ಇದುವರೆಗೆ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ತೆರವು ಮಾಡಿ ಸರ್ಕಾರದ ಆದೇಶ ಹೊರಡಿಸಿದೆ.
ಇನ್ನು ರಾಜ್ಯದ ಸರಾಸರಿ ಪಾಸಿಟಿವಿಟಿ ರೇಟ್ ಶೇ. 0.73 ಇದ್ದು, ವೀಕೆಂಡ್ ಕರ್ಫ್ಯೂ ಹೇರಿಕೆ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಕಂಡು ಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೊನಾ ಸೋಂಕು ಹೆಚ್ಚಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಬಹುದು ಎಂದು ಆದೇಶಿಸಲಾಗಿದೆ.