ನವದೆಹಲಿ, ಸ.10 (DaijiworldNews/HR): ತಮಿಳುನಾಡು, ಉತ್ತರಾಖಂಡ್, ಪಂಜಾಬ್ ಮತ್ತು ನಾಗಲ್ಯಾಂಡ್ ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
ಗುರುವಾರ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತ
ರಾಷ್ಟ್ರಪತಿಯ ಆದೇಶ ಪ್ರಕಾರ, ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ನಾಗಲ್ಯಾಂಡ್ ರಾಜ್ಯದ ಮಾಜಿ ರಾಜ್ಯಪಾಲ ಆರ್. ಎನ್. ರವಿ ತಮಿಳುನಾಡಿನ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಗುರ್ ಮೀತ್ ಸಿಂಗ್ ಉತ್ತರಾಖಂಡ್ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ಇನ್ನು ಬೇಬಿ ರಾಣಿ ಮೌರ್ಯ ಅವರು ಉತ್ತರಾಖಂಡ ರಾಜ್ಯಪಾಲೆ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಗುರ್ಮಿತ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.