ಕೋಲ್ಕತ್ತಾ, ಸ.10 (DaijiworldNews/HR): ಭಾಬಾನಿಪುರ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಚುನಾವಣಾ ಆಯೋಗ ತಿಳಿಸಿದೆ.
ಭಾಬನಿಪುರದ ಉಪ ಚುನಾವಣೆಗೆ ಮಮತಾ ಬ್ಯಾನರ್ಜಿ ಅವರನ್ನು ಅಭ್ಯರ್ಥಿಎಂದು ಟಿಎಂಸಿ ಅಧಿಕೃತವಾಗಿ ಘೋಷಿಸಿದೆ.
ಇನ್ನು ನಂದಿಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತ ಮಮತಾ ಬ್ಯಾನರ್ಜಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಈ ಉಪಚುನಾವಣೆಯಲ್ಲಿ ಗೆಲ್ಲಬೇಕಾಗಿದೆ. ಉಪಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲವಾದರೂ, ಕಾಂಗ್ರೆಸ್ ಮಮತಾ ವಿರುದ್ಧ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದೆ.