ನವದೆಹಲಿ, ಸ.10 (DaijiworldNews/HR): ದೇಶಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬ ಆಚರಿಸುತ್ತಿದ್ದು, ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಣೇಶೋತ್ಸವದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನಿಮ್ಮೆಲ್ಲರಿಗೂ ಗಣೇಶ ಚತುರ್ಥಿ ಶುಭಾಶಯಗಳು, ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನಕ್ಕೆ ಸಂತೋಷ, ಶಾಂತಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಗಣಪತಿ ಬಪ್ಪಾ ಮೋರಿಯಾ! "ಎಂದು ಬರೆದುಕೊಂಡಿದ್ದಾರೆ.
ಸರ್ಕಾರ ಜಾರಿಗೊಳಿಸಿರುವ ಕೊರೊನಾ ನಿಯಮಗಳನ್ನು ಅನುಸರಿಸಿ ದೇಶದಾದ್ಯಂತ ಇಂದು ಸರಳವಾಗಿ ಗಣೇಶ ಚತುರ್ಥಿ ಹಬ್ಬ ಆಚರಿಸಲಾಗುತ್ತಿದೆ.