ಕೋಲ್ಕತ್ತ, ಸ.10 (DaijiworldNews/HR) : ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಅವರು ಕಣಕ್ಕಿಳಿದಿದ್ದಾರೆ.
ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಅವರ ಕಾನೂನು ಸಲಹೆಗಾರರಾಗಿದ್ದ ಪ್ರಿಯಾಂಕಾ ಟಿಬ್ರೆವಾಲ್ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
ಇನ್ನು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದು, ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.
ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.