ದೆಹಲಿ, ಸ.10 (DaijiworldNews/HR) : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅಫ್ಘಾನಿಸ್ತಾನ ಸಂಘರ್ಷಗಳನ್ನು ತಮ್ಮ ಲಾಭಕ್ಕಾಗಿ ಬಳಸಲು ಪ್ರಯತ್ನಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ಇಡೀ ಕೇಂದ್ರ ಸರ್ಕಾರದ ನೀತಿಯು ತಾಲಿಬಾನ್ ಸಂಘರ್ಷವನ್ನು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ತನ್ನ ಅನುಕೂಲಕ್ಕೆ ಬಳಸಿಕೊಳ್ಳಬಹುದು ಎನ್ನುವುದರ ಮೂಲಕ ಮಾರ್ಗದರ್ಶನ ಮಾಡುತ್ತದೆ" ಎಂದು ಆರೋಪಿಪಿದ್ದಾರೆ.
ಇನ್ನು ಇದೇ ಕುರಿತಾಗಿ ಟ್ವೀಟ್ ಮಾಡಿರುವ ಅವರು, " ತಾಲಿಬಾನ್ ಆಡಳಿತದ ಬಗ್ಗೆ ನಮ್ಮ ನೀತಿಯನ್ನು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ ಆಡಳಿತವು ಹೇಗೆ ತನ್ನ ಅನುಕೂಲಕ್ಕೆ ಬಳಸಿಕೊಳ್ಳಬಹುದು ಎಂಬುದರ ಮೂಲಕ ಮಾರ್ಗದರ್ಶನ ನೀಡುತ್ತದೆ. ಅದು ಕಹಿ ಸತ್ಯ! ಮಾಧ್ಯಮಗಳು ಈಗಾಗಲೇ ತನ್ನ ಪಾತ್ರವನ್ನು ನಿರ್ವಹಿಸುತ್ತಿವೆ" ಎಂದು ಹೇಳಿದ್ದಾರೆ.