ಮುಂಬೈ, ಸೆ. 10 (DaijiworldNews/PY): ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಪ್ರಕರಣದಂತೆ ಮುಂಬೈನಲ್ಲೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯವೆಸಗಲಾಗಿದೆ.
ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದು, ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮಧು ಚವ್ಹಾಣ್ (45) ಎಂಬಾತನನ್ನು ಬಂಧಿಸಿದ್ದು, ಘಟನೆಯಲ್ಲಿ ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಭೇಟಿ ನೀಡಿದ್ದು, ತನಿಖೆ ಪ್ರಗತಿಯಲ್ಲಿದೆ.