ಬೆಂಗಳೂರು, ಸೆ. 10 (DaijiworldNews/SM): ಗಣೇಶ ಹಬ್ಬದ ಸಂದರ್ಭದಲ್ಲಿ ಸರಕಾರ ಬಡವರ್ಗದ ಜನತೆಗೆ ಸಿಹಿ ನೀಡಿದೆ. ಚೌತಿಯ ಸಂದರ್ಭದಲ್ಲಿ ಮನೆಯಿಲ್ಲದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಘೋಷಣೆ ಮಾಡಿದ್ದಾರೆ.
ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಸತಿ ಇಲಾಖೆ ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯಲಿದೆ. ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಳೆದ ಆಗಸ್ಟ್ 17ರಂದು ಸಿಎಂ ಬೊಮ್ಮಾಯಿ ಸೂಚಿಸಿದ್ದರು.
ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಳೆದ ಆಗಸ್ಟ್ 17ರಂದು ಸಿಎಂ ಬೊಮ್ಮಾಯಿ ಸೂಚಿಸಿದ್ದರು.