ನವದೆಹಲಿ, ಸೆ. 10 (DaijiworldNews/SM): ದೇಶದಲ್ಲಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳು ಮುಂದುವರೆದಿದೆ. ಲಸಿಕೆ ವಿತರಣೆಯು ಸಮರೋಪಾದಿಯಲ್ಲಿ ನಡೆಯುತ್ತಿದೆ. ಲಸಿಕೆ ವಿತರಣೆಯ ಅಭಿಯಾನ ಕೂಡ ದೇಶದಲ್ಲಿ ವೇಗವಾಗಿ ನಡೆಯುತ್ತಿದೆ.
ಕಳೆದ 9 ರಿಂದ 10 ಗಂಟೆಗಳಲ್ಲಿ 56 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 238 ದಿನಗಳು ಕಳೆದಿವೆ. ಇಲ್ಲಿಯ ತನಕ ಅಂದರೆ, ಶುಕ್ರವಾರ ರಾತ್ರಿ 7 ಗಂಟೆ ತನಕ 56,91,552 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಪೈಕಿ 38,36,154 ಮಂದಿಗೆ ಮೊದಲ ಡೋಸ್ ಹಾಗೂ 18,55,398 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.