ಮಂಡ್ಯ, ಸೆ 11 (DaijiworldNews/MS): ಶ್ರೀರಂಗಪಟ್ಟಣ ತಾಲ್ಲೂಕಿನ ಮೇಳಾಪುರ ಗ್ರಾಮದಲ್ಲಿ ರೈತನಿಗೆ ಗುಂಡೇಟು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಬೇಟೆಗಾರರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಅವರಿಂದ ಒಂದು ಬಂದೂಕು ಹಾಗೂ ಐದು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, " ಬೇಟೆಗಾರರು ಕಾಡುಹಂದಿಗಳನ್ನು ಬೇಟೆಯಾಡುತ್ತಿದ್ದಾಗ ಹೊಲದಲ್ಲಿ ಕೆಲಸದಲ್ಲಿ ನಿರತನಾಗಿದ್ದ ರೈತನಿಗೆ ಗುಂಡು ತಗುಲಿತ್ತು. ಈ ಸಂಬಂಧ ಮೈಸೂರಿನ ಹೆಬ್ಬಾಳದ ಶರತ್, ದೀಪ, ಮೈಸೂರು ತಾಲೂಕು ರಮ್ಮನಹಳ್ಳಿಯ ರವಿ, ಪ್ರಭು ಹಾಗೂ ಪಾಂಡವಪುರ ತಾಲೂಕು ಮೇನಾಗರ ಗ್ರಾಮದ ದೇವರಾಜು ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ .
ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಕಸ್ಟಡಿಗೆ ಮತ್ತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದರೆ.