ಮುಂಬೈ, ಸೆ. 11 (DaijiworldNews/PY): ಮುಂಬೈಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದು, ಆಕೆಗೆ ಚಿತ್ರಹಿಂಸೆ ನೀಡಿ ಟೆಂಪೋದಿಂದ ಹೊರಹಾಕಲಾಗಿತ್ತು. ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಳು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮಧು ಚವ್ಹಾಣ್ (45) ಎಂಬಾತನನ್ನು ಶುಕ್ರವಾರ ಬಂಧಿಸಿದ್ದರು.
ಮಹಿಳೆಗೆ ಚಿತ್ರಹಿಂಸೆ ನೀಡಿದ್ದ ಆರೋಪಿ ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದರು. ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.