ಗಾಂಧಿನಗರ, ಸೆ 11 (DaijiworldNews/MS): ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ರಾಜೀನಾಮೆ ಸಲ್ಲಿಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ರೂಪಾಣಿ, ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಹೇಳುತ್ತೇನೆ. ಹಠಾತ್ ರಾಜೀನಾಮೆಯ ಹಿಂದಿನ ಕಾರಣಗಳ ಬಗ್ಗೆ ಪ್ರಶ್ನೆಗಳ ಬಗ್ಗೆ ಉತ್ತರಿಸಿದ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ, ಇದು ಬಹಳ ಸಮಯ . ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧನ್ಯವಾದ ಎಂದು ಹೇಳಿದ್ದಾರೆ.
ರಾಜೀನಾಮೆಯ ಹಿಂದಿನ ನಿಜವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ವಿಜಯ್ರನ್ನು ಕೆಳಗಿಳಿಯುವಂತೆ ಮಾಡಿರಬಹುದು ಎಂಬ ಮಾತುಗಳೂ ಕೇಳಿ ಬಂದಿದೆ. ಮುಂದಿನ ವರ್ಷ ತನ್ನ ಅಧಿಕಾರಾವಧಿಯನ್ನು ಮುಗಿಸಬೇಕಿದ್ದ ರೂಪಾನಿ, 2017ರ ಡಿಸೆಂಬರ್ನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.