ಬೆಂಗಳೂರು, ಸೆ. 11 (DaijiworldNews/PY): "ಕಾಂಗ್ರೆಸ್ ಪಕ್ಷದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜಾತಿ ಗಣತಿ ಡಿ.ಕೆ ಶಿವಕುಮಾರ್ ಅವರ ಜಾತಿ ಗಣತಿ ಎಂಬುದು ಪ್ರತ್ಯೇಕವಾಗಿದೆಯೇ?" ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, "ಕಾಂಗ್ರೆಸ್ ಪಕ್ಷದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜಾತಿ ಗಣತಿ ಡಿ.ಕೆ ಶಿವಕುಮಾರ್ ಅವರ ಜಾತಿ ಗಣತಿ ಎಂಬುದು ಪ್ರತ್ಯೇಕವಾಗಿದೆಯೇ? ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಅವರ ಕಾಂಗ್ರೆಸ್ ಪ್ರವೇಶ ಇದನ್ನೇ ಸೂಚಿಸುತ್ತಿದೆಯಲ್ಲವೇ?" ಎಂದು ಕೇಳಿದೆ.
"ಜಾತಿ ಗಣತಿ ಜಾರಿಗೆ ಕಾಂಗ್ರೆಸ್ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದರು ಎಂಬುದಕ್ಕೆ ಸಾಕ್ಷ್ಯ ಕೊಡಿ ಎಂದಿದ್ದ ಸಿದ್ದರಾಮಯ್ಯ ಅವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಜಾತಿಗಣತಿ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟಪಡಿಸಲು ಕೆಪಿಸಿಸಿ ಅಧ್ಯಕ್ಷರು ಸಮಿತಿ ರಚಿಸಿರುವ ಸುದ್ದಿಯನ್ನು ಹೇಗೆ ಸ್ವೀಕರಿಸುತ್ತೀರಿ?" ಎಂದು ಪ್ರಶ್ನಿಸಿದೆ.
'ಎಲೆಕ್ಷನ್' ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರ್ಸವಾಮಿ ಅವರು ಪ್ರಶ್ನಿಸಿದ್ದರು.