ಬೆಂಗಳೂರು, ಸ.11 (DaijiworldNews/HR): ಕಾಂಗ್ರೆಸ್ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಇಂದಿರಾ ಗಾಂಧಿ ಅವರೇ ಅಡಿಪಾಯ ಹಾಕಿದ್ದು" ಎಂದು ನಟ ಚೇತನ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳನ್ನು ಬರೆದುಕೊಂಡಿರುವ ಅವರು, "1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ ಮಗಳು ಇಂದಿರಾ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ವಂಶ ರಾಜಕಾರಣಿಯಾದ ಇಂದಿರಾ ಮುಂದೆ ಪ್ರಶ್ನಾರ್ಹ ಪ್ರಧಾನಿಯೂ ಆಗುತ್ತಾರೆ. ಆ ಮೂಲಕ ಕಾಂಗ್ರೆಸ್ನ ಕುಟುಂಬ ರಾಜಕೀಯ ಮತ್ತು ಸ್ವಜನ ಪಕ್ಷಪಾತಕ್ಕೆ ಅವರು ಅಡಿಪಾಯ ಹಾಕುತ್ತಾರೆ" ಎಂದಿದ್ದಾರೆ.
ಇನ್ನು ಇತ್ತೀಚೆಗೆ ಚೇತನ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕುರಿತು ನಿರಂತರವಾಗಿ ಟೀಕೆ, ವಿಮರ್ಶೆಗಳನ್ನೂ ಮಾಡುತ್ತಿದ್ದ್ದು, ಈಗ ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡಿದ್ದಾರೆ.