ಬೆಂಗಳೂರು, ಸ.11 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 801 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,60,931ಕ್ಕೆ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕೊರೊನಾಗೆ ಶನಿವಾರ ರಾಜ್ಯದಲ್ಲಿ 801 ಮಂದಿಗೆ ಸೋಂಕು ದೃಢಪಟ್ಟಿದ್ದು, 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,487ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 1142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,06,746ಕ್ಕೆ ಏರಿಕೆಯಾಗಿ, ಇನ್ನು16,672 ಸಕ್ರೀಯ ಪ್ರಕರಣಗಳಿವೆ.
ಕರ್ನಾಟಕದಲ್ಲಿ ಇಂದು 1,19,503 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.67ಕ್ಕೆ ಇಳಿದಿದೆ.