ಬೆಳಗಾವಿ, ಸ.11 (DaijiworldNews/HR): "ಕಾಂಗ್ರೆಸ್ನಿಂದ ಬರುವುದಕ್ಕೆ ಬಿಜೆಪಿಯವರು ನನಗೆ ಹಣದ ಆಫರ್ ಮಾಡಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿರುವುದಾಗಿ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, "ಹಣ ಪಡೆಯದೆ ಬಿಜೆಪಿ ಸೇರಿದ್ದೇನೆ. ಯಾವ ಕಾರಣದಿಂದ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟಿಲ್ಲವೋ ಗೊತ್ತಿಲ್ಲ. ಮುಂದಿನ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಖಂಡಿತವಾಗಿಯೂ ಕೊಡುವುದಾಗಿ ಭರವಸೆ ನೀಡಿದ್ದಾರೆ" ಎಂದರು.
ಇನ್ನು ನಾನು 20 ವರ್ಷ ಒಕ್ಕಲುತನ ಮಾಡಿದ್ದು,ಕೃಷಿ ಖಾತೆ ನೀಡಿದರೆ ಒಳ್ಳೆಯ ಕೆಲಸ ಮಾಡುತ್ತಿದ್ದೆ. ಆದರೆ ಜವಳಿ ಮತ್ತು ಅಲ್ಪಸಂಖ್ಯಾತ ಖಾತೆ ನೀಡಿದ್ದರು. ಅದನ್ನು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ" ಎಂದು ಹೇಳಿದ್ದಾರೆ.