ಅಹಮದಾಬಾದ್, ಸೆ. 12 (DaijiworldNews/PY): ಗುಜರಾತ್ನ ಹೊಸ ಸಿಎಂ ಆಯ್ಕೆ ಹಿನ್ನೆಲೆ ಇಬ್ಬರು ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ವೀಕ್ಷಕರಾಗಿ ನೇಮಕ ಮಾಡಿದ್ದು, ಇವರು ಭಾನುವಾರ ಗುಜರಾತ್ಗೆ ಭೇಟಿ ನೀಡುವ ಸಾಧ್ಯತೆ ಇದೆ.
ನೂತನ ಮುಖ್ಯಮಂತ್ರಿಯ ಆಯ್ಕೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಯು ಭಾನುವಾರದಂದು ನಡೆಯುವ ಸಾಧ್ಯತೆ ಇದೆ.
ಗುಜರಾತ್ ಸಿಎಂ ವಿಜಯ್ ರೂಪಾಣಿ (65) ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜೀನಾಮೆ ಸಲ್ಲಿಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ್ದ ರೂಪಾಣಿ, "ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಹೇಳುತ್ತೇನೆ. ಹಠಾತ್ ರಾಜೀನಾಮೆಯ ಹಿಂದಿನ ಕಾರಣಗಳ ಬಗ್ಗೆ ಪ್ರಶ್ನೆಗಳ ಬಗ್ಗೆ ಉತ್ತರಿಸಿದ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ, ಇದು ಬಹಳ ಸಮಯ . ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧನ್ಯವಾದ" ಎಂದು ಹೇಳಿದ್ದರು.
ಮುಂದಿನ ವರ್ಷ ತನ್ನ ಅಧಿಕಾರಾವಧಿಯನ್ನು ಮುಗಿಸಬೇಕಿದ್ದ ರೂಪಾಣಿ, 2017ರ ಡಿಸೆಂಬರ್ನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.