ಕಲಬುರ್ಗಿ, ಸೆ.12 (DaijiworldNews/PY): "ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಬೇಕು ಎನ್ನುವ ಬಗ್ಗೆ ಚರ್ಚಿಸಲು ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯ ನಂತರ ತಮ್ಮ ತೀರ್ಮಾನ ತಿಳಿಸಲಾಗುವುದು" ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ" ಎಂದಿದ್ದಾರೆ.
ಬೆಂಗಳೂರಿನಿಂದ ಜೆಡಿಎಸ್ ಸದಸ್ಯರನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದ್ದು, ಮುಂದಿನ ರಾಜಕೀಯ ಲೆಕ್ಕಾಚಾರದ ಹಿನ್ನೆಲೆ ಕಲಬುರ್ಗಿ ಪಾಳಿಕೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲು ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ.