ನವದೆಹಲಿ, ಸ.12 (DaijiworldNews/HR): ದೆಹಲಿಯ ಹಲವೆಡೆ ಮಳೆಯಿಂದಾಗಿ ಜಲಾವೃತಗೊಂಡಿದ್ದು, ಭಾರೀ ಮಳೆಯ ನಡುವೆಯೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದೆ.
ಭಾರತೀಯ ಕಿಸಾನ್ ಯುನಿಯನ್ ನಾಯಕ ರಾಕೇಶ್ ಟಿಕಾಯತ್ ಬೆಂಬಲಿಗರೊಂದಿಗೆ ಗಾಜಿಪುರದಲ್ಲಿ ಜಲಾವೃತ ಫ್ಲೈ ಓವರ್ ಬಳಿ ಮಳೆ ನೀರಿನಲ್ಲಿ ಕುಳಿತು ಧರಣಿ ನಡೆಸಿದ್ದಾರೆ.
ಭಾರತೀಯ ಕಿಸಾನ್ ಯುನಿಯನ್ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್, ಬಿಕೆಯು ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ರೈತರು ನೀರು ತುಂಬಿರುವ ರಸ್ತೆಯಲ್ಲಿಯೇ ಕುಳಿತು ಧರಣಿ ಮುಂದುವರಿಸಿದ್ದಾರೆ.
ಈ ಕುರಿತು ಮಾತನಾಡಿದ ಧರ್ಮೇಂದ್ರ ಮಲಿಕ್, "ಕೇಂದ್ರದ ಕೃಷಿ ಕಾಯಿದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ವರ್ಷದ ಮೂರು ಋತುಗಳನ್ನು ನೋಡಿದ್ದು, ನಾವು ಈಗ ಯಾವುದಕ್ಕೂ ಹೆದರುವುದಿಲ್ಲ" ಎಂದು ಹೇಳಿದ್ದಾರೆ.