ಸೇಲಂ, ಸ.12 (DaijiworldNews/HR): ನೀಟ್ ಪರೀಕ್ಷೆ ಪ್ರಾರಂಭವಾಗುವ ಕೆಲವು ಗಂಟೆಗಳಿಗೆ ಮುನ್ನ 19 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಎಸ್ ಧನುಷ್(19) ಎಂಬ ವಿದ್ಯಾರ್ಥಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, "ಸೇಲಂನ ಮೆಟ್ಟೂರು ಸಮೀಪದ ಕೂಝೈಯೂರ್ ನಿವಾಸಿ ಧನುಷ್ ಈಗಾಗಲೇ ಎರಡು ಬಾರಿ ಪರೀಕ್ಷೆ ಬರೆದಿದ್ದರೂ, ಉತ್ತೀರ್ಣರಾಗುವಲ್ಲಿ ವಿಫಲವಾಗಿದ್ದರು. ಇದೀಗ ಮತ್ತೆ ಇಂದಿನ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು. ಧನುಷ್ ಮೇಚೇರಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಮತ್ತೆ ಫೇಲ್ ಆಗಬಹುದು ಎಂಬ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾ"ರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಧನುಷ್ ತನ್ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಹೋದರ ನಿಶಾಂತ್ ತಿಳಿಸಿದ್ದಾರೆ.