ನವದೆಹಲಿ, ಸ.12 (DaijiworldNews/HR): ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕರಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮರು ನೇಮಕ ಮಾಡಲಾಗಿದೆ.
ಭಾನುವಾರದಂದು ಎಎಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಜ್ರಿವಾಲ್ ಅವರನ್ನು ರಾಷ್ಟ್ರೀಯ ಸಂಚಾಲಕರಾಗಿ ಮರು ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇನ್ನು ಪಂಕಜ್ ಗುಪ್ತಾ ಮತ್ತು ಎನ್ ಡಿ ಗುಪ್ತಾ ಕಾರ್ಯದರ್ಶಿ ಮತ್ತು ಪಕ್ಷದ ಖಜಾಂಚಿಯಾಗಿ ಆಯ್ಕೆಯಾಗಿದ್ದು, ಪಕ್ಷದ ರಾಷ್ಟ್ರೀಯ ಮಂಡಳಿಯು ಹೊಸ 34 ಸದಸ್ಯರ ಕಾರ್ಯಕಾರಿ ಸಂಸ್ಥೆಯನ್ನು ಶನಿವಾರ ಆಯ್ಕೆ ಮಾಡಲಾಗಿದೆ.