ಗುವಾಹಟಿ, ಸ.12 (DaijiworldNews/HR): ಅಸ್ಸಾಂ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಳನಾಡು ಜಲ ಸಾರಿಗೆ ಇಲಾಖೆಯ ಆರು ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಜೊರ್ಹಾತ್ ಜಿಲ್ಲೆಯ ನಿಮತಿ ಘಾಟ್ ಬಳಿ ಸೆಪ್ಟೆಂಬರ್ 8ರಂದು ಖಾಸಗಿ ದೋಣಿ 'ಮ ಕಮಲಾ' ಸರ್ಕಾರಿ ಸ್ವಾಮ್ಯದ ದೋಣಿಗೆ ಡಿಕ್ಕಿ ಹೊಡೆದಿದ್ದು, ಇದರಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ನಾಪತ್ತೆಯಾಗಿದ್ದಾರೆ.
ಇನ್ನು ಖಾಸಗಿ ದೋಣಿಯ ಮೂವರು ಕೆಲಸಗಾರರನ್ನು ವಿಚಾರಿಸುತ್ತಿದ್ದೇವೆ. ಇನ್ನೂ ಕೆಲವು ಅಧಿಕಾರಿಗಳಿಗೆ ಹೇಳಿಕೆ ದಾಖಲಿಸುವಂತೆ ಸಮನ್ಸ್ ಜಾರಿ ಮಾಡಿದ್ದೇವೆ' ಎಂದು ಜೊರ್ಹಾತ್ನ ಪೊಲೀಸ್ ವರಿಷ್ಠಾಧಿಕಾರಿ ಅಂಕುರ್ ಜೈನ್ ಅವರು ತಿಳಿಸಿದ್ದಾರೆ.
ಐಡಬ್ಲ್ಯುಟಿಯ ಆರು ಸಿಬ್ಬಂದಿ ನಿಯಮಗಳನ್ನು ಅನುಸರಿಸದೇ, ತಪ್ಪನ್ನು ಮಾಡಿದ್ದು, ಈ ದುರಂತವನ್ನು ತಪ್ಪಿಸಬಹುದಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನಿಮತಿ ಘಾಟ್ನಿಂದ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.