ಬೆಂಗಳೂರು, ಸ.12 (DaijiworldNews/HR): ರಾಜ್ಯದಲ್ಲಿ ಭಾನುವಾರ 803 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಭಾನುವಾರ 17 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 37,504 ಜನ ಸೋಂಕಿತರು ಮೃತಪಟ್ಟಿದ್ದಾರೆ. 802 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 29,07,548 ಜನ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ 16,656 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.80 ರಷ್ಟು ಇದೆ.
ಇನ್ನು ಬೆಂಗಳೂರಿನಲ್ಲಿ ಇಂದು ಹೊಸದಾಗಿ 255 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.