ಗುಜರಾತ್, ಸೆ. 12 (DaijiworldNews/SM): ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿದ್ದು, ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗುಜರಾಜ್ ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್, ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ನೂತನ ಸಚಿವ ಸಂಪುಟ ಶೀಘ್ರದಲ್ಲೇ ರಚನೆಯಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಮಾಲೋಚಿಸಿದ ಬಳಿಕ ನೂತನ ಸಂಪುಟವನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆಯೂ ಕೂಡ ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ಇನ್ನು ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮೇಲೆ ನಂಬಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.