ಬೆಂಗಳೂರು, ಸೆ. 12 (DaijiworldNews/SM): ಸೋಮವಾರದಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಂದಿನ ಹತ್ತುದಿನಗಳ ಕಾಲ ನಡೆಯಲಿದ್ದು, ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಿದ್ಧತೆಗಳನ್ನು ನಡೆಸಿಕೊಂಡಿದೆ.
ಕೊರೊನಾ ವೈರಸ್, ಲಾಕ್ಡೌನ್, ಬೆಲೆ ಏರಿಕೆ, ಪ್ರವಾಹ ಪರಿಸ್ಥಿತಿ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸದನದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಹಾಗೂ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಹೇಗೆ ಎನ್ನುವುದನ್ನು ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ.
ಇನ್ನು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಅಧಿವೇಶನ ಇದಾಗಿದೆ. ಮತ್ತೊಂದೆಡೆ ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ ಬಳಿಕದ ಮೊದಲ ಸದನವಾಗಿದ್ದು, ಪ್ರತಿಪಕ್ಷಗಳಿಗೆ ಹಲವು ಹಸ್ತ್ರಗಳು ಪ್ರಯೋಗಿಸಲು ಅವಕಾಶವಾಗಿದೆ.