ನವದೆಹಲಿ, ಸೆ 13 (DaijiworldNews/MS): ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಸ್ಪರ್ಧೆ ನಡೆಸಲಿದೆ ಎಂದು ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ .ನಾವು ದೃಢ ನಂಬಿಕೆಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಪಕ್ಷದ ಕಾರ್ಯಕರ್ತರು ಪ್ರತಿ ಕ್ಷೇತ್ರಕ್ಕೆ ಹೋಗಲಿದ್ದಾರೆ' ಮುಂದಿನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಸ್ಪರ್ಧಿಸುತ್ತದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ನಿರ್ಧರಿಸಿಲ್ಲ ಆದರೆ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಸಲ್ಮಾನ್ ಖುರ್ಷಿದ್ ಹೇಳಿದರು.
ಚುನಾವಣೆ ಪ್ರಣಾಳಿಕೆಯ ಬಗ್ಗೆ ಮಾಹಿತಿ ನೀಡಿದ ಸಲ್ಮಾನ್ ಖುರ್ಷಿದ್, ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ತಜ್ಞರ ಶಿಫಾರಸಿನ ಮೇರೆಗೆ ತಯಾರಿಸಲಾಗುವುದಿಲ್ಲ. ಇದು ಸ್ಥಳೀಯ ಜನರ ಸಾಮಾನ್ಯ ಸಮಸ್ಯೆಗಳನ್ನು ಒಳಗೊಂಡಿರುತ್ತದೆ. ಪಕ್ಷದ ಸದಸ್ಯರು ವಿಧಾನಸಭೆಗಳಿಗೆ ಭೇಟಿ ನೀಡಿ ಜನರನ್ನು ಸಂಪರ್ಕಿಸಲು ಸಮಸ್ಯೆ ಅರಿಯಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಈ ಪ್ರಣಾಳಿಕೆ ತಮ್ಮದೇ ಎಂದು ಅವರು ಹೇಳಬಹುದು” ಎಂದು ಹೇಳಿದರು.