ನವದೆಹಲಿ, ಸ. 13 (DaijiworldNews/HR): ಕೇರಳದ ಕೋಯಿಕ್ಕೋಡ್ನಲ್ಲಿ ವಿಮಾನ ದುರಂತ ಸಂಭವಿಸಿರುವುದಕ್ಕೆ ಪೈಲಟ್ ಮಾರ್ಗಸೂಚಿಯನ್ನು ಸರಿಯಾಗಿ ಪಾಲನೆ ಮಾಡದಿರುವುದೇ ಕಾರಣ ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) ಹೇಳಿದೆ.
ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಭಾರೀ ಮಳೆ ಬರುತ್ತಿದ್ದು, ಇದರಿಂದಾಗಿ ಪೈಲಟ್ಗೆ ರನ್ವೇ ಸರಿಯಾಗಿ ಗೋಚರಿಸಲಿಲ್ಲ. ಈ ವೇಳೆ 'ಗೋ ಅರೌಂಡ್' ಎಂಬ ಸಂದೇಶವನ್ನು ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ರೂಮಿಗೆ ಕಳುಹಿಸಿದ ಬಳಿಕವೂ ಪೈಲಟ್ ಟಚ್ಡೌನ್ ವಲಯವನ್ನು ದಾಟಿ ರನ್ವೇಯ ಅರ್ಧ ದೂರದಲ್ಲಿ ಲ್ಯಾಂಡ್ ಮಾಡಿದ್ದಾರೆ. ಇದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದೆ.
ಇನ್ನು ದುಬೈಯಿಂದ ವಂದೇ ಭಾರತ್ ಮಿಷನ್ ಅಡಿ 2020ರ ಆಗಸ್ಟ್ 7ರಂದು 184 ಪ್ರಯಾಣಿಕರನ್ನು ಹೊತ್ತುಕೊಂಡು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಕೋಯಿಕ್ಕೊಂಡಿಗೆ ಬಂದಿದ್ದು, ಈ ವೇಳೆ ರನ್ವೇ ಸರಿಯಾಗಿ ಕಾಣಿಸದ ಹಿನ್ನೆಲೆಯಲ್ಲಿ ವಿಮಾನ ಕೆಳಗೆ ಜಾರಿ ಬಿದ್ದ ಪರಿಣಾಮ ಇಬ್ಬರು ಪೈಲಟ್ ಸೇರಿದಂತೆ 21 ಮಂದಿ ಮೃತಪಟ್ಟಿದ್ದರು.