ಉತ್ತರ ಪ್ರದೇಶ, ಸ. 13 (DaijiworldNews/HR): "ಕಾಂಗ್ರೆಸ್ ಇಡೀ ದೇಶದಲ್ಲಿ ಭಯೋತ್ಪಾದನೆಯ ವಿಷ ಬೀಜ ಬಿತ್ತಿದ್ದು, 2022 ರ ಚುನಾವಣೆಯ ನಂತರ ಕಾಂಗ್ರೆಸ್ ನಿರ್ನಾಮವಾಗಿ ಹೋಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸಂತ ಕಬೀರ್ ನಗರದಲ್ಲಿ 126 ಕೋಟಿ ವೆಚ್ಚದಲ್ಲಿ ನಿರ್ಮಾಣದ ಯೋಜನೆಯ ಅಡಿಯಲ್ಲಿ ಜಿಲ್ಲಾ ಕಾರಾಗೃಹದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಭೆಯನ್ನು ಉದ್ದೆಶಿಸಿ ಮಾತನಾಡಿದ ಯೋಗಿ, "ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷವು ಅಧಿಕಾರದಲ್ಲಿದ್ದಾಗ ರಾಜ್ಯದ ಜನರ ನಿರೀಕ್ಷೆಯನ್ನು ಹುಸಿ ಮಾಡಿದ್ದು, ಜನರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಕೂಡ ಮಾಡಿಲ್ಲ" ಎಂದರು.
ಇನ್ನು ಭಗವಾನ್ ರಾಮನ ಭಕ್ತರ ಮೇಲೆ ಗುಂಡು ಹಾರಿಸಿದವರು ಮತ್ತು ತಾಲಿಬಾನಿಗಳನ್ನು ತಮ್ಮ ಜಾತೀಯತೆ ಮತ್ತು ರಾಜವಂಶದ ಮನಸ್ಥಿತಿಯಿಂದ ಬೆಂಬಲಿಸುವವರನ್ನು ರಾಜ್ಯದ ಜನರು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.