ಬೆಂಗಳೂರು, ಸ. 13 (DaijiworldNews/HR): ಕೇಂದ್ರ ಸರ್ಕಾರವು ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಇಂದು ವಿಧಾನಮಂಡಲ ಅಧಿವೇಶನ ಆರಂಭಗೊಂಡಿದ್ದು, ಕಲಾಪಕ್ಕೆ ಕಾಂಗ್ರೆಸ್ ನಾಯಕರು ಎತ್ತಿನಗಾಡಿಯಲ್ಲಿ ಬರುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದ್ದು, ಮೋದಿ ಸರ್ಕಾರ ಜನತೆಗೆ ಬರಿ ಸುಳ್ಳು ಹೇಳುತ್ತಿದೆ" ಎಂದಿದ್ದಾರೆ.
ಇನ್ನು ಹಿಂದಿನ ಸರ್ಕಾರದ ವಿರುದ್ಧವೂ ಆಡಳಿತ ಪಕ್ಷ ಕಿಡಿಕಾರುತ್ತಿದೆ. ಆದರೆ ಕಳೆದ ಏಳು ವರ್ಷಗಳ ಅವಧಿಯಲ್ಲಿ 24 ಲಕ್ಷ ಕೋಟಿ ಆದಾಯ ಬಂದಿದೆ. ಕೇಂದ್ರ ಸರ್ಕಾರ ಬರಿ ಸುಳ್ಳು ಹೇಳುತ್ತಿದೆ. ಬೆಲೆ ಏರಿಕೆ ಖಂಡಿಸಿ ಸದನದ ಒಳಗೆ ಹಾಗೂ ಹೊರಗೆ ಎರಡೂ ಕಡೆ ಹೋರಾಟ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.