ಬೆಂಗಳೂರು, ಸೆ.13 (DaijiworldNews/PY): "ಮುಂಬರುವ ದಿನಗಳಲ್ಲಿ ಸಿದ್ದರಾಮಯ್ಯ ಅವರು ಆಕಸ್ಮಾತಾಗಿ ಗೆದ್ದರು ಜೂಡಾ ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುವುದು" ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಅಧಿವೇಶನದಲ್ಲಿ ಭಾಗವಹಿಸುವ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಬಿ.ಎಸ್ ಯಡಿಯೂರಪ್ಪ ಅವರು ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಬಿಎಸ್ವೈ, "ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಅವರಿಗೆ ನಾನು ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇವೆ. ನಾನು ಹಾಗೂ ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ" ಎಂದಿದ್ದಾರೆ.
"ಓರ್ವ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಿಎಂ ಆಗಿಯೇ ಕೆಲಸ ಮಾಡುಬೇಕೆಂದಿಲ್ಲ. ಸರ್ಕಾರದ ಉತ್ತಮ ಕಾರ್ಯಗಳನ್ನು ಶ್ಲಾಘಿಸುತ್ತೇನೆ" ಎಂದು ಹೇಳಿದ್ದಾರೆ.