ಯಾದಗಿರಿ, ಸೆ.13 (DaijiworldNews/PY): ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಾಲ್ಕೈದು ಜನರಿದ್ದ ತಂಡ ಮಹಿಳೆಯನ್ನು ಕಬ್ಬಿನ ಜಲ್ಲೆಯಿಂದ ಥಳಿಸಿ ಅಂಗಾಂಗ ಮುಟ್ಟಿ ವಿಕೃತ ಕೃತ್ಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಯಾದಗಿರಿ-ಶಹಾಪುರ ಹೆದ್ದಾರಿ ಸಮೀಪದ ಜಮೀನೊಂದರಲ್ಲಿ ರಾತ್ರಿ ವೇಳೆ ಮಹಿಳೆಯನ್ನು ನಗ್ನಗೊಳಿಸಿ, ಆಕೆಯ ಮೇಲೆ ಕಬ್ಬಿನ ಹಲ್ಲೆಯಿಂದ ಹಲ್ಲೆ ಮಾಡಲಾಗಿದ್ದು, ಹಲ್ಲೆಕೋರರೇ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗರಾಜ್, ಭೀಮಾಶಂಕರ್, ಅಯ್ಯಪ್, ಶರಣ ಎನ್ನುವ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ.