ನವದೆಹಲಿ, ಸ. 13 (DaijiworldNews/HR): ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಮಕ್ಕಳು ಸೇರಿದಂತೆ ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ನಡೆದಿದೆ.
ಐದು ಅಗ್ನಿಶಾಮಕ ವಾಹನಗಳನ್ನು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಸ್ಥಳಕ್ಕೆ ರವಾನಿಸಲಾಗಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು 'ಸಬ್ಜಿ ಮಂಡಿ ಪ್ರದೇಶದಲ್ಲಿ ಕಟ್ಟಡ ಕುಸಿತ ಘಟನೆ ಅತ್ಯಂತ ದುಃಖಕರವಾಗಿದ್ದು, ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ನಾನು ಸ್ವತಃ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ರಕ್ಷಣಾ ಪ್ರಯತ್ನಗಳಿಗೆ ಸಹಾಯ ಮಾಡಲು ಎನ್ ಡಿಆರ್ ಎಫ್ ತಂಡವು ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದ ಸ್ಥಳವನ್ನು ತಲುಪಿದೆ.