ಗುಜರಾತ್, ಸ. 13 (DaijiworldNews/HR): ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಗುಜರಾತ್ನ 17ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ ವಚನ ಬೋಧಿಸಿದ್ದು, ಈ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಷಿ ಸೇರಿ ಗೋವಾ ಮತ್ತು ಹರಿಯಾಣ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ.
ಇನ್ನು ರಾಜ್ಯ ಚುನಾವಣೆಗೆ ಒಂದು ವರ್ಷ ಮೊದಲು ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಭೂಪೇಂದ್ರ ಪಟೇಲ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.