ಬೆಂಗಳೂರು, ಸ. 13 (DaijiworldNews/HR): ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 673 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 673 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,62,408ಕ್ಕೆ ಏರಿಕೆಯಾಗಿದೆ.
ಇನ್ನು ಇಂದು 13 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 37,517ಕ್ಕೆ ಏರಿಕೆಯಾಗಿದ್ದು, 16,241 ಸಕ್ರೀಯ ಪ್ರಕರಣಗಳಿವೆ.
ರಾಜ್ಯದಲ್ಲಿ ಇಂದು 1,074 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,08,622ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 1,19,014 ಮಂದಿಯ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, 673 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.